ಸಾರಿಗೆ ಕೆಲಸಕ್ಕೆಂದು ರಷ್ಯಾಗೆ ತೆರಳಿದ್ದ ಭಾರತೀಯ ಯುವಕ ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಸಾವು

Prasthutha|

ಮಾಸ್ಕೊ: ಜ.13 ರಂದು ಏಜೆಂಟ್‌ ಮೂಲಕ ಸಾರಿಗೆ ಕೆಲಸಕ್ಕೆಂದು ರಷ್ಯಾಗೆ ತೆರಳಿದ್ದ ಹ‌ರ್ಯಾಣದ ಯುವಕ ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಸಾವಗೀಡಾಗಿದ್ದಾರೆ.

- Advertisement -

ಹರಿರ್ಯಾಣದ ಖೈತಾಲ್ ಜಿಲ್ಲೆಯ 22 ವರ್ಷದ ರವಿ ಮೌನ್‌ ಉಕ್ರೇನ್ ವಿರುದ್ಧ ಯುದ್ಧದಲ್ಲಿ ಸಾವನ್ನಪ್ಪಿದನ್ನು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಖಚಿತಪಡಿಸಿದೆ.

ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಷ್ಯಾ ಸೇನೆಯಲ್ಲಿರುವ ಎಲ್ಲ ಭಾರತೀಯರನ್ನು ಬಿಡುಗಡೆ ಮಾಡುವುದಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದರು.

- Advertisement -

ಭಾರೀ ಉದ್ಯೋಗದ ಆಫರ್‌ ನೀಡಿದ್ದ ಹಿನ್ನೆಲೆಯಲ್ಲಿ ರವಿ ಕುಟುಂಬ ತಮ್ಮ ಬಳಿ ಇದ್ದ ಒಂದು ಎಕರೆ ಜಮೀನು ಮಾರಾಟ ಮಾಡಿ 11.50 ಲಕ್ಷ ರು. ಹಣ ಹೊಂದಿಸಿ ರವಿಯನ್ನು ರಷ್ಯಾಕ್ಕೆ ಕಳುಹಿಸಿಕೊಟ್ಟಿತ್ತು. ಇದೀಗ ಶವವನ್ನು ಮರಳಿ ತರಲೂ ತಮ್ಮ ಬಳಿ ಹಣ ಇಲ್ಲ. ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಕುಟುಂಬ ಒತ್ತಾಯಿಸಿದೆ.



Join Whatsapp