‘ಕೌನ್ ಬನೇಗಾ ಕರೋಡ್ ಪತಿ’ಯಲ್ಲಿ 50 ಲಕ್ಷ ರೂ. ಗೆದ್ದ ಉಡುಪಿಯ 7ನೇ ತರಗತಿ ವಿದ್ಯಾರ್ಥಿ ಅನಮಯ

Prasthutha|

ಉಡುಪಿ : ಜನಪ್ರಿಯ ನಟ ಅಮಿತಾಭ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕ್ರಿಝ್ ಆಧಾರಿತ ಕಾರ್ಯಕ್ರಮದಲ್ಲಿ ಉಡುಪಿ ಮೂಲದ ವಿದ್ಯಾರ್ಥಿಯೊಬ್ಬ 50 ಲಕ್ಷ ರೂ. ಗೆಲ್ಲುವ ಮೂಲಕ ಮಹತ್ವದ ಸಾಧನೆ ಮಾಡಿದ್ದಾನೆ ಎಂದು ವರದಿಯೊಂದು ತಿಳಿಸಿದೆ.
ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್ ನ 7ನೇ ತರಗತಿ ವಿದ್ಯಾರ್ಥಿ ಅನಮಯ ಯೋಗೇಶ್ ದಿವಾಕರ್ ‘ಕೌನ್ ಬನೇಗಾ ಕರೋಡ್ ಪತಿ’ ಕ್ವಿಝ್ ಸ್ಪರ್ಧೆಯಲ್ಲಿ 50 ಲಕ್ಷ ರೂ. ಗೆದ್ದಿದ್ದಾನೆ.

ದೇಶದ ಎಂಟು ವಿದ್ಯಾರ್ಥಿಗಳಿಗೆ ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿತ್ತು. ಹಾಟ್ ಸೀಟ್ ನಲ್ಲಿ ಅಮಿತಾಭ್ ಬಚ್ಚನ್ ಕೇಳುವ 15 ಪ್ರಶ್ನೆಗಳ ಪೈಕಿ ಅನಮಯ 14 ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡುವ ಮೂಲಕ 50 ಲಕ್ಷ ರೂ. ತನ್ನದಾಗಿಸಿಕೊಂಡಿದ್ದಾನೆ.

- Advertisement -

15ನೇ ಪ್ರಶ್ನೆಗೆ 1 ಕೋಟಿ ರೂ. ಗೆಲ್ಲುವ ಅವಕಾಶವಿತ್ತಾದರೂ, ಖಚಿತವಾದ ಉತ್ತರ ನೀಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಆಟದಿಂದ ಕ್ವಿಟ್ ಆಗುವ ನಿರ್ಧಾರ ಕೈಗೊಂಡಿದ್ದಾನೆ.

- Advertisement -