ತಮಿಳುನಾಡಿನ ಖ್ಯಾತ ಇಡ್ಲಿ ಅಮ್ಮನಿಗೆ ಮನೆ ಗಿಫ್ಟ್ ಕೊಟ್ಟ ಆನಂದ್ ಮಹೀಂದ್ರಾ

Prasthutha|

- Advertisement -

ಚೆನ್ನೈ: ಮದರ್ಸ್ ಡೇ ಪ್ರಯುಕ್ತ ಖ್ಯಾತ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ತಮಿಳುನಾಡಿನ ಇಡ್ಲಿ ಅಮ್ಮನಿಗೆ ಹೊಸ ಮನೆಯನ್ನು ಉಡುಗೊರೆಯಾಗಿ ಕೊಡುವ ಮೂಲಕ ನೀಡಿದ್ದ ಭರವಸೆಯನ್ನು ಈಡೇರಿದ್ದಾರೆ.

ಈ ಕುರಿತ ವೀಡಿಯೋವನ್ನು ಆನಂದ್ ಮಹೀಂದ್ರಾ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ವೀಡಿಯೋದಲ್ಲಿ ಇಡ್ಲಿ ಅಮ್ಮ ತನ್ನ ಹೊಸ ಮನೆಗೆ ಪ್ರವೇಶಿಸುತ್ತಿರುವುದನ್ನು ಕಾಣಬಹುದಾಗಿದೆ. ತಾಯಂದಿರ ದಿನದಂದೇ ಉಡುಗೊರೆ ನೀಡುವ ಸಲುವಾಗಿ ಸರಿಯಾದ ಸಮಯಕ್ಕೆ ಮನೆಯ ನಿರ್ಮಾಣವನ್ನು ಪೂರ್ಣಗೊಳಿಸಿ ನಮ್ಮ ತಂಡ ಇಡ್ಲಿ ಅಮ್ಮನಿಗೆ ಮನೆಯನ್ನು ನೀಡಿದಕ್ಕೆ ಧನ್ಯವಾದಗಳು. ಅವರು ತಾಯಿಯ ಸದ್ಗುಣಗಳ ಸಾಕಾರ. ಪೋಷಣೆ, ಕಾಳಜಿ ಮತ್ತು ನಿಸ್ವಾರ್ಥತೆ ಅವರಲ್ಲಿದೆ. ಅವರನ್ನು ಮತ್ತು ಅವರ ಕೆಲಸವನ್ನು ಸಾಧ್ಯವಾದಷ್ಟು ಬೆಂಬಲಿಸೋಣ. ನಿಮ್ಮೆಲ್ಲರಿಗೂ ತಾಯಂದಿರ ದಿನದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

- Advertisement -

ಕಮಲಾತಾಲ್ (ಇಡ್ಲಿ ಅಮ್ಮ) ಅವರು ತಮಿಳುನಾಡಿನ ಪೆರು ಬಳಿಯ ವಡಿವೇಲಂಪಾಳ್ಯಂ ಎಂಬ ಹಳ್ಳಿಯಲ್ಲಿ ವಾಸಿಸುತ್ತಿದ್ದಾರೆ. ಅವರು ಸುಮಾರು 37 ವರ್ಷಗಳಿಂದ ಕೇವಲ 1 ರೂಪಾಯಿಗೆ ಸಾಂಬಾರ್ ಮತ್ತು ಚಟ್ನಿಯೊಂದಿಗೆ ಇಡ್ಲಿಗಳನ್ನು ಮಾರಾಟ ಮಾಡುತ್ತಿದ್ದಾರೆ.

Join Whatsapp