ಬಿಡಿಭಾಗಗಳನ್ನು ಉಪಯೋಗಿಸಿ ಜೀಪ್ ತಯಾರಿಸಿದ ವ್ಯಕ್ತಿಗೆ ಹೊಸ ವಾಹನ ಗಿಫ್ಟ್ ನೀಡಿದ ಆನಂದ್ ಮಹೀಂದ್ರಾ

Prasthutha|

ಮುಂಬೈ: ಹಲವು ವಾಹನಗಳ ಬಿಡಿಭಾಗಗಳನ್ನು ಉಪಯೋಗಿಸಿ ಹೊಸ ಮಾದರಿಯ ಕಿಕ್ ಸ್ಟಾರ್ಟ್ ಮಾಡುವ ಜೀಪ್ ತಯಾರಿಸಿದ್ದ ವ್ಯಕ್ತಿಗೆ ಮಹೀಂದ್ರಾ ಗ್ರೂಪ್ ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ನೂತನ ವಾಹನವನ್ನು ಉಡುಗೊರೆಯಾಗಿ ನೀಡಿದ್ದಾರೆ.

- Advertisement -

ಮಹಾರಾಷ್ಟ್ರದ ದತ್ತಾತ್ರೇಯ ಲೋಹರ್ ಹಳೆಯ ವಾಹನದ ಬಿಡಿ ಭಾಗಗಳನ್ನು ಬಳಸಿ ಈ ವಾಹನ ಸಿದ್ಧಪಡಿಸಿದ್ದರು. ಇದಕ್ಕಾಗಿ 60 ಸಾವಿರ ರೂ. ಖರ್ಚು ಮಾಡಿದ್ದರು. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಕಿಕ್-ಸ್ಟಾರ್ಟಿಂಗ್ ಜೀಪ್‍ ನ ವೀಡಿಯೋ ಹಂಚಿಕೊಂಡಿದ್ದ ಆನಂದ್ ಮಹೀಂದ್ರಾ, ಅವರಿಗೆ ಬೊಲೆರೋ ಕಾರು ಗಿಫ್ಟ್ ನೀಡುವುದಾಗಿ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.

Join Whatsapp