ಮುಂಬೈ: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾದ ಡಾ. ಆನಂದ್ ತೇಲ್ತುಂಬ್ಡೆ ಸೇರಿದಂತೆ ಇತರ ಮೂವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದ ಎನ್.ಐ.ಎ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಈ ಸಂಬಂಧ ಎರಡು ವಾರಗಳಲ್ಲಿ ಉತ್ತರಿಸುವಂತೆ ಎನ್ಐಎ ಗೆ ಸೂಚಿಸಿದೆ.
ಈ ಹಿಂದೆ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎನ್.ಐ.ಎ ನ್ಯಾಯಾಲಯ ಹಿರಿಯ ನಾಗರಿಕರಾದ ಶೋಮಾ ಸೇನ್, ಆನಂದ್ ತೇಲ್ತುಂಬ್ಡೆ, ಗೌತಮ್ ನವ್ಲಾಖಾ ಮತ್ತು ವೆರ್ನಾನ್ ಗೊನ್ಸಾಲ್ವಿಸ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.
ಎನ್.ಐ.ಎ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಆನಂದ್ ಮತ್ತು ಇತರರು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು.