ಇಂದು ಬಿಜೆಪಿ ಸೇರಲಿದ್ದಾರೆ ಹಿರಿಯ ನಟ ಅನಂತ್ ನಾಗ್

Prasthutha|

- Advertisement -

ಬೆಂಗಳೂರು: ಹಿರಿಯ ನಟ ಮತ್ತು ಮಾಜಿ ಸಚಿವ ಅನಂತ್ ನಾಗ್ ಅವರು ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಮಲ್ಲೇಶ್ವರಂ ಬಿಜೆಪಿ (BJP) ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ‌. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -

ಈ ಹಿಂದೆ ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಅನಂತ್ ನಾಗ್ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದರು. 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​​ ನಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.



Join Whatsapp