ವಿಧಾನ ಪರಿಷತ್ ಚುನಾವಣೆಯಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ಕಣ್ಮರೆ ! ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ?

Prasthutha|

ಉ.ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಪೈಪೋಟಿ ಜೋರಾಗಿದ್ದು, ಅಭ್ಯರ್ಥಿಗಳು ತಮ್ಮ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಆದರೆ ಬಿಜೆಪಿಯ ಅಭ್ಯರ್ಥಿಯ ಪರ ಪ್ರಚಾರದಲ್ಲಿ ಬಿಜೆಪಿಯ ಫೈರ್ ಬ್ರ್ಯಾಂಡ್ ಎನಿಸಿಕೊಂಡಿರುವ ಸಂಸದ ಅನಂತ್ ಕುಮಾರ್ ಹೆಗಡೆ ಮಾತ್ರ ಅಂತರ ಕಾಯ್ದುಕೊಂಡಿದ್ದಾರೆ. ಎಂಎಲ್‌ಸಿ ಚುನಾವಣಾ ಕಣದಿಂದ ಕಣ್ಮರೆಯಾಗಿರುವುದು ಸದ್ಯಕ್ಕೆ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದಕ್ಕೆ ಪುಷ್ಟಿ ನೀಡಿದೆ.

- Advertisement -

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಐದು ಶಾಸಕರನ್ನು ಹೊಂದಿದ್ದರೂ ಈ ಪರಿಷತ್ ಚುನಾವಣೆಯು ಪ್ರತಿಷ್ಠೆ ಪಡೆದಿದೆ. ಎಲ್ಲಾ ಚುನಾವಣೆಗಳಲ್ಲಿ ಮುಂಚೂಣಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅನಂತ್ ಕುಮಾರ್ ಹೆಗಡೆ ಈ ಬಾರಿ ಮಾತ್ರ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗಾಗಲಿ ಅಥವಾ ಅಭ್ಯರ್ಥಿ ಪರ ಪ್ರಚಾರದಲ್ಲಾಗಲಿ ಎಲ್ಲಿಯೂ ಕಾಣಿಸಿಕೊಳ್ಳದೇ ಇದ್ದುದು ಸಾಕಷ್ಟು ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ.

ಅನಂತ್ ಕುಮಾರ್ ಹೆಗಡೆ ಸೂಚಿಸಿದ್ದ ಅಭ್ಯರ್ಥಿಗೆ ಟಿಕೆಟ್ ಸಿಗದ ಹಿನ್ನೆಲೆ ಅವರು ಮುನಿಸಿಕೊಂಡಿದ್ದಾರೆಂದು ಸಂಸದರ ಬೆಂಬಲಿಗರು ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಜಿಲ್ಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಜನಸ್ವರಾಜ್ ಯಾತ್ರೆಗೂ ಅನಂತ್‌ ಕುಮಾರ್ ಹೆಗ್ಡೆ ಗೈರಾಗಿದ್ದರು. ಬಿಜೆಪಿಯಿಂದ ಕಾರವಾರದ ಗಣಪತಿ ಉಳ್ವೇಕರ್‌ಗೆ ಟಿಕೆಟ್ ನೀಡಲಾಗಿದ್ದು, ಕಾರವಾರ ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ಬೆಂಬಲಿತ ಅಭ್ಯರ್ಥಿಯಾಗಿದ್ದಾರೆ.

Join Whatsapp