ಕರ್ನಾಟಕದ ಭಕ್ತರಿಗೆ ಸೂಕ್ತ ರಕ್ಷಣೆ ನೀಡಲು ಆಂಧ್ರ ಸಿಎಂಗೆ ಮನವಿ: ಬಸವರಾಜ ಬೊಮ್ಮಾಯಿ

Prasthutha|

ಬೆಂಗಳೂರು: ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಭಕ್ತರ ನಡುವೆ ಘರ್ಷಣೆ ನಡೆದಿರುವ ಕುರಿತು ಅಲ್ಲಿನ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಮತ್ತು ಬೆಳವಣಿಗೆಗಳ ಕುರಿತು ನಿರಂತರ ಸಂಪರ್ಕದಲ್ಲಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘರ್ಷಣೆಯಲ್ಲಿ ರಾಜ್ಯದ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದರು.

ಶ್ರೀಶೈಲದಲ್ಲಿ ಸ್ಥಳೀಯರು ಸೇರಿದಂತೆ ಕರ್ನಾಟಕ ಹಾಗೂ ಮಹಾರಾಷ್ಟ್ರದ ಭಕ್ತರು ಸೇರುತ್ತಾರೆ. ಈ ರಾಜ್ಯಗಳಿಂದ ಬರುವ ಭಕ್ತರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಆಂಧ್ರಪ್ರದೇಶದ ಮುಖ್ಯಮಂತ್ರಿಗೆ ಮನವಿ ಮಾಡುವುದಾಗಿ ತಿಳಿಸಿದರು.

- Advertisement -

ರಾಜ್ಯದಲ್ಲಿ ಹಲವಾರು ವಿಚಾರಗಳು ಇತ್ತೀಚಿನ ದಿನಗಳಲ್ಲಿ ಚರ್ಚೆಗೆ ಬಂದಿವೆ, ಶಾಲಾ ಮಕ್ಕಳ ಸಮವಸ್ತ್ರ ವಿವಾದ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಬಗೆಹರಿದಿದೆ. ಸಮಾಜದಲ್ಲಿ ವಿವಿಧ ಸಮುದಾಯಗಳ ಜನರು ತಮ್ಮತಮ್ಮ ನಂಬಿಕೆಗಳ ಆಧಾರದ ಮೇಲೆ ಬದುಕು ಸಾಗಿಸುತ್ತಾ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಯಾವುದೇ ವಿಚಾರಗಳನ್ನು ಪ್ರಸ್ತಾಪ ಮಾಡುವಾಗ ಸಂಯಮದಿಂದ ವರ್ತಿಸಬೇಕು ಎಲ್ಲರೂ ಶಾಂತಿ, ಸುವ್ಯವಸ್ಥೆ ಕಾಪಾಡಿಕೊಳ್ಳಲು ಸಹಕರಿಸಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದರು.



Join Whatsapp