ಆಂಧ್ರ: ಸಿಲಿಂಡರ್ ಸ್ಫೋಟಗೊಂಡು 4 ಸಾವು, ಇಬ್ಬರಿಗೆ ಗಂಭೀರ ಗಾಯ

Prasthutha|

ಅನಂತಪುರ: ಸಿಲಿಂಡರ್ ಸ್ಫೋಟದಿಂದಾಗಿ ಮನೆಯ ಗೋಡೆ ಕುಸಿದು ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.

- Advertisement -

“ಇಂದು ಬೆಳ್ಳಂಬೆಳಗ್ಗೆ ಅನಂತಪುರದ ಮುಳಕಲೇಡು ಗ್ರಾಮದ ನಿವಾಸದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ಪರಿಣಾಮ ಅಕ್ಕಪಕ್ಕದ ಮನೆಯ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದರು” ಎಂದು ಅನಂತಪುರದ ಪೊಲೀಸ್ ವರಿಷ್ಠಾಧಿಕಾರಿ (ಎಸ್ ಪಿ) ಫಕೀರಪ್ಪ ತಿಳಿಸಿದ್ದಾರೆ.

ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ.

- Advertisement -

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ



Join Whatsapp