ನವದೆಹಲಿ: ಆಂಧ್ರಪ್ರದೇಶದಲ್ಲಿ ಬಿಜೆಪಿ, ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನಸೇನಾ ಪಕ್ಷಗಳ ನಡುವೆ ಮೈತ್ರಿ ಮಾಡಿಕೊಳ್ಳಲಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅಧಿಕೃತವಾಗಿ X ಮಾಡಿ ತಿಳಿಸಿದ್ದಾರೆ.
ಆಂಧ್ರಪ್ರದೇಶ ಕೆಟ್ಟ ರೀತಿಯಲ್ಲಿ ಹಾಳಾಗಿದೆ ಎಂದಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಈ ಮೈತ್ರಿಯಿಂದ ದೇಶ ಮತ್ತು ರಾಜ್ಯಕ್ಕೆ ಲಾಭವಾಗಲಿದೆ ಎಂದು ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪ್ರಧಾನಿ ಮೋದಿ ನಾಯಕತ್ವದಲ್ಲಿ ದೇಶ ಮತ್ತು ರಾಜ್ಯ ಖಂಡಿತವಾಗಿಯೂ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು. ಒಂದೆರೆಡು ದಿನದಲ್ಲಿ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದು ಬಿಜೆಪಿ ಹೇಳಿದೆ.