ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬದಲು ಹೆಚ್ಚಿನ ಅನುದಾನ ನಿಡಬೇಕು ಎಂದು ಚಂದ್ರಬಾಬು ನಾಯ್ಡು ಪ್ರಧಾನಿಯವರಲ್ಲಿ ವಿನಂತಿಸಿಕೊಂಡಿದ್ದಾರೆ.
ರಾಜ್ಯದ ಅಭಿವೃದ್ಧಿಗೆ ಹಲವು ಮಹತ್ವದ ಪ್ರಸ್ತಾವನೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ಮುಂದಿಟ್ಟು, ಕೇಂದ್ರ ಸರ್ಕಾರದ ಬೆಂಬಲವನ್ನು ಕೋರಿದರು ಎಂದು ಮೂಲಗಳು ತಿಳಿಸಿವೆ.
‘ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ರಚನಾತ್ಮಕ ಭೇಟಿ ನಡೆಯಿತು. ಆಂಧ್ರಪ್ರದೇಶ ಅಭಿವೃದ್ಧಿ ಹಾಗೂ ಕಲ್ಯಾಣದ ಬಗ್ಗೆ ಪ್ರಮುಖ ಚರ್ಚೆಗಳು ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಆಂಧ್ರಪ್ರದೇಶವು ಮತ್ತೆ ಶಕ್ತಿಶಾಲಿಯಾಗಿ ಹೊರಹೊಮ್ಮಲಿದೆ’ ಎಂದು ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.