ಆಂಧ್ರ ಪ್ರದೇಶದಲ್ಲಿ ಅಪಘಾತ: ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ

Prasthutha|

ಪಡುಬಿದ್ರಿ: ಮೀನಿನ ಕಂಟೇನರ್ ಮತ್ತು ಸರಕು ಲಾರಿಯ ನಡುವೆ ನಡೆದ ಭೀಕರ ಅಪಘಾತದಲ್ಲಿ ಉಚ್ಚಿಲ ಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ ಟೋಲ್ ಗೇಟ್ ಬಳಿ ನಡೆದಿದೆ.

- Advertisement -


ಗಾಯಾಳುವನ್ನು ಮೀನಿನ ಲಾರಿಯ ಚಾಲಕ ಉಚ್ಚಿಲ ಬಡಾ ಗ್ರಾಮದ ಭಾಸ್ಕರ ನಗರದ ನಿವಾಸಿ ಬಶೀರ್ ಎಂದು ಗುರುತಿಸಲಾಗಿದೆ.


ಇನ್ನು ಸರಕು ಲಾರಿಯ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

- Advertisement -


ಬಶೀರ್ ಅವರ ಸಂಬಂಧಿಕರು ಉಚ್ಚಿಲ ಬಡಾ ಗ್ರಾಮದಿಂದ ಆಂಧ್ರಪ್ರದೇಶಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp