ಯಾದಗಿರಿ: ಮುಸ್ಲಿಂ ಸಮುದಾಯದ ಬಗ್ಗೆಕೋಮು ಪ್ರಚೋದನೆ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂದೋಲದ ಸಿದ್ದಲಿಂಗ ದೋಷಿ ಎಂದು ಯಾದಗಿರಿಯ ಸೀನಿಯರ್ ಸಿವಿಲ್ ಕೋರ್ಟ್ ತೀರ್ಪು ನೀಡಿದೆ.
ಯಾದಗಿರಿ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ 2015ರ ಜನವರಿ 2ರಂದು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿದ್ದಲಿಂಗ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
8 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ.