ಚಲಿಸುತ್ತಿದ್ದ BMTC ಬಸ್​ನಲ್ಲಿ ಆಕಸ್ಮಿಕ ಬೆಂಕಿ| ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Prasthutha|

ಆನೇಕಲ್: ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಆನೇಕಲ್ ತಾಲೂಕಿನ ಬಸವನಪುರ ಗೇಟ್​ನಲ್ಲಿ ನಡೆದಿದೆ.

- Advertisement -

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕೆಳಗಿಳಿದು ಪ್ರಯಾಣಿಕರು ಪಾರಾಗಿದ್ದಾರೆ. ತಾಂತ್ರಿಕದೋಷದಿಂದ ಬೆಂಕಿ ಹೊತ್ತಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. KA 57, F​ 0569 ಸಂಖ್ಯೆ BMTC ಬಸ್​ ಬೆಂಕಿಗಾಹುತಿ ಆಗಿದ್ದು, ಮೆಜೆಸ್ಟಿಕ್-ಜಿಗಣಿ ನಡುವೆ ಸಂಚರಿಸುತ್ತಿತ್ತು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

Join Whatsapp