ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಕಟ್ಟಡಗಳನ್ನು ಕೇಳಿದ್ದೇವೆ ಮತ್ತು ಅದಕ್ಕೂ ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೀಡುವ ಗೌರವಧನವನ್ನು ಹೆಚ್ಚಿಸಲು ಬೇಡಿಕೆ ಸಲ್ಲಿಸಲಾಗಿದೆ ಎಂದು ಲಕ್ಷ್ಮಿ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ರಾಜ್ಯ ಬಜೆಟ್ ಮಂಡಿಸಲಿದ್ದಾರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗಿರುವ ನಿರೀಕ್ಷೆಗಳೇನು ಅಂತ ಕೇಳಿದಾಗ, ತಮ್ಮ ಇಲಾಖೆಯ ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಕೋಟ್ಯಾಂತರ ಮಹಿಳೆಯರಿಗೆ ಪ್ರಯೋಜನವಾಗಿ ಅವರ ಸಬಲೀಕರಣವಾಗುತ್ತಿದೆ, ಹಾಗಾಗಿ ಇಲಾಖೆಯಿಂದ ದೊಡ್ಡ ಬೇಡಿಕೆಯೇನೂ ಇಲ್ಲ ಎಂದು ಹೇಳಿದರು. ಆದರೆ, ಅಂಗನವಾಡಿ ಕೇಂದ್ರಗಳಿಗೆ ಕಟ್ಟಡಗಳನ್ನು ಕೇಳಿದ್ದೇವೆ ಮತ್ತು ಅದಕ್ಕೂ ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೀಡುವ ಗೌರವಧನವನ್ನು ಹೆಚ್ಚಿಸಲು ಬೇಡಿಕೆ ಸಲ್ಲಿಸಲಾಗಿದೆ ಎಂದು ಲಕ್ಷ್ಮಿ ಹೇಳಿದರು. ಅಂಗನವಾಡಿಗಳಿಗೆ ಬರುವ ಮಕ್ಕಳಿಗೆ ಸಮವಸ್ತ್ರದ ಜೊತೆ ಶೂಗಳನ್ನು ನೀಡಬೇಕೆನ್ನುವ ಪ್ರಸ್ತಾಪವನ್ನು ಸಹ ಸಲ್ಲಿಸಿದ್ದೇವೆ ಎಂದು ಹೇಳಿದ ಅವರು ರಾಜ್ಯದ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ್ ಅಂಗನವಾಡಿ ಸಕ್ಷಮ ಅಂಗನವಾಡಿಯಾಗಿ ಪರಿವರ್ತಿಸುವ ಉದ್ದೇಶ ತಮಗಿದೆ ಎಂದರು.