ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ಮನೆ ಮಾಲಕ

Prasthutha|

- Advertisement -

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಕ್ಷೇತ್ರದಲ್ಲಿ ರಾಕ್ಷಸೀ ಕೃತ್ಯ

ಬೆಳಗಾವಿ: ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಆವರಣದಲ್ಲಿ ಬೆಳೆಯಲಾಗಿದ್ದ ಹೂ ಕಿತ್ತರೂ ಎಂಬ ಕಾರಣಕ್ಕೆ ಅಂಗನವಾಡಿ ಸಹಾಯಕಿಗೆ ಅವಾಚ್ಯವಾಗಿ ನಿಂದಿಸಿ, ಮೂಗು ಕತ್ತರಿಸಿ ಮನೆ ಮಾಲೀಕ ಅಟ್ಟಹಾಸ ಮೆರೆದಿದ್ದಾನೆ.

- Advertisement -

ಈ ಘಟನೆ ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿದೆ.

ಸುಗಂಧಾ ಮೋರೆ(50) ಎಂಬ ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ನಡೆದಿದೆ.

ಸುಂಗಧಾ ಅವರು ಈಗ ಚಿಕಿತ್ಸೆ ಪಡೆಯುತ್ತಿದ್ದು ಸಾವು ಬದುಕಿನ ಮಧ್ಯೆ ನರಳಾಡುತ್ತಿದ್ದಾರೆ.

ಮನೆ ಮಾಲೀಕ ಕಲ್ಯಾಣಿ ಮೋರೆ ಎಂಬಾತ ಅಂಗನವಾಡಿ ಸಹಾಯಕಿಯ ಮೂಗನ್ನೇ ಕಟ್ ಮಾಡಿ ಅಟ್ಟಹಾಸ ಮೆರೆದಿದ್ದಾನೆ.

ಮೂಗು ಕತ್ತರಿಸಿರುವ ಹಿನ್ನೆಲೆ ಶ್ವಾಸಕೋಶದಲ್ಲಿ ರಕ್ತ ಹೋಗಿ ಮಹಿಳೆ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

Join Whatsapp