ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಎರಡನೇ ಆರ್ಥಿಕ ಮುಂಗಡ ಪತ್ರ ಮಂಡನೆ ಮಾಡುತ್ತಿದ್ದು, ಹೋರಾಟ ಮಾಡುತ್ತಿದ್ದ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಹಾಯಧನವನ್ನು 1000 ರೂ. ನಿಂದ 1500 ರೂ.ಗೆ ಏರಿಕೆ ಮಾಡಲಾಗಿದೆ.
ಶೂನ್ಯ ಬಡ್ಡಿದರದಲ್ಲಿ ಮಹಿಳೆಯರಿಗೆ ಸಾಲ ಸೌಲಭ್ಯ ಯೋಜನೆ ಘೋಷಣೆ ಮಾಡಿದ್ದು, ಗೃಹಿಣಿಯರಿಗೆ ತಿಂಗಳಿಗೆ 500 ರೂ. ಗಳ ಸಹಾಯಧನ ನೀಡುವ ಬಗ್ಗೆ ತಿಳಿಸಲಾಗಿದೆ. ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಶೀಘ್ರದಲ್ಲೇ ಜಾರಿ. ಆ್ಯಸಿಡ್ ದಾಳಿ ಸಂತ್ರಸ್ಥರಿಗೆ ಮಾಶಾಸನ 10,000ಕ್ಕೆ ಏರಿಕೆ ಮಾಡಲಾಗಿದೆ.
ಗ್ರಾಮ ಸಹಾಯಕರ ಹುದ್ದೆಯನ್ನು ‘ಜನಸೇವಕ’ ಎಂದು ಮರುನಾಮಕರಣ ಮಾಡಲಾಗಿದೆ. ಗ್ರಾಮ ಸಹಾಯಕರ ಮಾಸಿಕ ಗೌರವಧನ 13,000 ರೂ. ಗಳಿಂದ. 14,000 ರೂ. ಗೆ ಹೆಚ್ಚಳ ಮಾಡಲಾಗಿದೆ.