ಮೂರು ವರ್ಷದ ಬಾಲಕನ ಗುಪ್ತಾಂಗಕ್ಕೆ ಬೆಂಕಿ ಹಚ್ಚಿದ ಅಂಗನವಾಡಿ ಶಿಕ್ಷಕಿ-ಸಹಾಯಕಿ

Prasthutha|

ತುಮಕೂರು:  ಮೂರು ವರ್ಷದ ವಿದ್ಯಾರ್ಥಿಯನ್ನು ಗದರಿಸಲು ಅಂಗನವಾಡಿ ಕೇಂದ್ರದ ಶಿಕ್ಷಕಿ ಮತ್ತು ಸಹಾಯಕಿ ಸೇರಿ ಬಾಲಕನ ಗುಪ್ತಾಂಗಕ್ಕೆ ಬೆಂಕಿಕಡ್ಡಿಯಿಂದ ಸುಟ್ಟಿರುವ ಹೇಯ ಪ್ರಕರಣ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ.

- Advertisement -

ಪದೇ ಪದೇ ಮೂತ್ರ ಮತ್ತು ಶೌಚವನ್ನು ಮಾಡುತ್ತಿದ್ದ ಎಂಬ ಕಾರಣಕ್ಕೆ ಶಿಕ್ಷಕಿ ಮತ್ತು ಸಹಾಯಕಿ ಹೀಗೆ ಅಮಾನವೀಯವಾಗಿ ನಡೆದುಕೊಂಡಿದ್ದಾರೆ.  ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿ ಬೆಂಕಿಕಡ್ಡಿ ಗೀರಿದ್ದು, ಚಡ್ಡಿ ಹಾಕದೇ ಕುಳಿತುಕೊಂಡಿದ್ದ ಬಾಲಕನ ಗುಪ್ತಾಂಗಕ್ಕೆ ತಗುಲಿ ಗಾಯವಾಗಿದ್ದು, ಮನೆಗೆ ಹೋದಾಗ ಗಮನಿಸಿದ ಅಜ್ಜಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕರಿಗೆ ದೂರು ನೀಡಿದ್ದಾರೆ.

ಘಟನೆ ತಿಳಿದ ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಘಟಕದ ಅಧಿಕಾರಿಗಳು ಗ್ರಾಮಕ್ಕೆ ಧಾವಿಸಿ ಮಕ್ಕಳು, ಶಿಕ್ಷಕಿ, ಸಹಾಯಕಿ ಮತ್ತು ಬಾಲಕನ ಪೋಷಕರ ಹೇಳಿಕೆ ಪಡೆದಿದ್ದಾರೆ. ಶಿಕ್ಷಕಿ ಹಾಗೂ ಸಹಾಯಕಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಾಲೂಕು ಅಧಿಕಾರಿ ನೋಟಿಸ್ ನೀಡಿ ತಪ್ಪೊಪ್ಪಿಗೆ ಪತ್ರ ಪಡೆದಿದ್ದಾರೆ.



Join Whatsapp