ಬೆಂಗಳೂರು: ಬಿಸಿಲು ಹೆಚ್ಚಿರುವ ಕಲಬುರಗಿ, ಬಳ್ಳಾರಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ ವಿಜಯಪುರ ಮತ್ತು ಬಾಗಲಕೋಟೆ, ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಜಿ ಸಿ ಪ್ರಕಾಶ್ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ ಕೇಂದ್ರಗಳನ್ನು ಬೆಳಗ್ಗೆ 08:00 ಗಂಟೆಯಿಂದ ಮಧ್ಯಾಹ್ನ 12.00 ಗಂಟೆಯವರೆಗೆ ತಾತ್ಕಾಲಿಕವಾಗಿ ಪರಿಷ್ಕರಿಸಲಾಗಿದೆ. ಬದಲಾದ ವೇಳಾಪಟ್ಟಿಯಂತೆ ಐಸಿಡಿಎಸ್ ಸೇವೆಗಳನ್ನು ನಿಯಮಾನುಸಾರ ಯಾವುದೇ ಅಡೆತಡೆ ಇಲ್ಲದೆ ಅಂಗನವಾಡಿ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಜಿ ಸಿ ಪ್ರಕಾಶ್ ಸುತ್ತೋಲೆ ಹೊರಡಿಸಿದ್ದಾರೆ.
ಐಎಂಡಿ ಪ್ರಕಾರ, ರಾಜ್ಯದ ಬಾಗಲಕೋಟೆ, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಳ್ಳಾರಿ, ಬೆಳಗಾವಿ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದಿದೆ. ಹೀಗಾಗಿ ಎಂಟು ಜಿಲ್ಲೆಗಳ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ ಮಾಡಲಾಗಿದೆ.