ರಾಜ್ಯ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Prasthutha|

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ನೀಡಿದ ಆಶ್ವಾಸನೆಯನ್ನು ಬಜೆಟ್ನಲ್ಲಿ ಈಡೇರಿಸದೇ ಮಾತು ತಪ್ಪಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು ಇಂದು ಹಲವೆಡೆ ಪ್ರತಿಭಟನೆ ನಡೆಸಿದರು. ಗೃಹ ಲಕ್ಷ್ಮೀ ಯೋಜನೆ ಬೇಡ ಗೌವರದನ ಹೆಚ್ಚಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಸರ್ಕಾರ ನೀಡಿರುವ ಮೊಬೈಲ್ ವಾಪಸ್ಸು ನೀಡಲು ಮುಂದಾಗಿದ್ದಾರೆ. ಈ ಬಾರಿ ಬಜೆಟ್ ನಲ್ಲಿ ಸರ್ಕಾರ ಕೊಟ್ಟ ಆಶ್ವಾಸನೆ ಈಡೇರಿಸಿಲ್ಲ. ಗೌರವದನದ ಕುರಿತು ಬಜೆಟ್ ನಲ್ಲಿ ಪ್ರಸ್ಥಾವವಾಗಿಲ್ಲ. ಈ ಹಿನ್ನಲೆ ಕೈಯಲ್ಲಿ ಮೊಬೈಲ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

- Advertisement -


ರಾಯಚೂರಿನಲ್ಲೂ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ರಾಯಚೂರು ನಗರದ ರಾಮಲಿಂಗೇಶ್ವರ ದೇವಸ್ಥಾನದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿವರೆಗೂ ಕಾಲ್ನಡಿಗೆ ಜಾಥಾ ನಡೆಸಿದರು. ನಂತರ ಕಚೇರಿ ಎದುರು ಕೆಲ ಕಾಲ ಕೂತು ಪ್ರತಿಭಟನೆ ನಡೆಸಿ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಇದೇ ವೇಳೆ ಸರ್ಕಾರ ಕೊಟ್ಟ ಮೊಬೈಲ್ ಅನ್ನು ಸರ್ಕಾರವೇ ಹಿಂಪಡೆಯಲಿ ಎಂದು ಆಗ್ರಹಿಸಿದರು. ಬಳಿಕ ಕಾರ್ಯಕರ್ತೆಯರು ಇಲಾಖೆ ಉಪ ನಿರ್ದೇಶಕ ಚೇತನ್ ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಕೆ ಮಾಡಿದರು.



Join Whatsapp