ಅಂಗನವಾಡಿ ನೌಕರರ ಪ್ರತಿಭಟನೆ: ನಾಯಕರ ಮೇಲೆ FIR

Prasthutha|

ಬೆಂಗಳೂರು : ಅಂಗನವಾಡಿ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಸಂಘಟನೆಯ ನಾಯಕರ ಮೇಲೆ ಎಫ್ ಐಆರ್ ದಾಖಲಾಗಿದೆ.

- Advertisement -


10 ದಿನಗಳ ಕಾಲ ನಡೆದ ‘ಪ್ರತಿಭಟನೆ ಸಂದರ್ಭದಲ್ಲಿ ಹೈಕೋರ್ಟ್ ನೀಡಿರುವ ಆದೇಶ ಉಲ್ಲಂಘಿಸಿದ್ದಾರೆ. ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಹೀಗಾಗಿ, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.


ಸಿಐಟಿಯು ರಾಜ್ಯ ಅಧ್ಯಕ್ಷೆ ಎಸ್. ವರಲಕ್ಷ್ಮಿ, ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಸುನಂದಾ, ಮುಖಂಡರಾದ ಶಾಂತಾ ಘಂಟಿ, ಜಿ. ಕಮಲಾ ಹಾಗೂ ಜಿಲ್ಲಾ ಘಟಕಗಳ ಪ್ರಮುಖರ ಮೇಲೆ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

Join Whatsapp