ಮಂಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜುಲೈ 27 ರಂದು (ಗುರುವಾರ) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದ.ಕ. ಜಿಲ್ಲೆಯಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಿರುವುದರಿಂದ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.