ದ.ಕ ಜಿಲ್ಲಾದ್ಯಂತ ನಾಳೆ (ಜು.27) ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

Prasthutha|

ಮಂಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜುಲೈ 27 ರಂದು (ಗುರುವಾರ) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

- Advertisement -

ದ.ಕ. ಜಿಲ್ಲೆಯಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಿರುವುದರಿಂದ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Join Whatsapp