ಕೇಂದ್ರದಿಂದ ಹಿಂಬಾಗಿಲ ಮೂಲಕ ಸಿಎಎ ಜಾರಿಗೆ ಯತ್ನ; ಅಧಿಸೂಚನೆ ಪ್ರಶ್ನಿಸಲು ನಿರ್ಧಾರ : ಅನೀಸ್ ಅಹ್ಮದ್

Prasthutha|

ಪೌರತ್ವ ತಿದ್ದುಪಡಿ ಕಾಯ್ದೆ-ಸಿಎಎಯನ್ನು ಹಿಂಬಾಗಿಲಿನ ಮೂಲಕ ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್, ಕೋಮು ಆಧಾರದಲ್ಲಿ ಪೌರತ್ವ ನೀಡಲು ಕೇಂದ್ರ ಗೃಹ ಸಚಿವಾಲಯ ಇತ್ತೀಚೆಗೆ ಹೊರಡಿಸಿರುವ ಅಧಿಸೂಚನೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಟ್ವಿಟ್ಟರ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿರುವ ಅವರು, ಕೇಂದ್ರ ಸರ್ಕಾರ ಇತ್ತೀಚೆಗೆ ಅಫ್ಘಾನಿಸ್ತಾನ, ಬಾಂಗ್ಲಾದೇಶ, ಪಾಕಿಸ್ತಾನದ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲು ಅರ್ಜಿ ಆಹ್ವಾನಿಸಿದೆ. ಈ ಅಧಿಸೂಚನೆ ಸಂಪೂರ್ಣವಾಗಿ ಕಾನೂನುಬಾಹಿರವಾಗಿದ್ದು, ಇದನ್ನು ಸಂಘಟನೆಯು ಕಾನೂನಾತ್ಮಕವಾಗಿ ಪ್ರಶ್ನಿಸಲಿದೆ ಎಂದು ತಿಳಿಸಿದ್ದಾರೆ.

 ಕೋವಿಡ್-19ನ ಎರಡನೇ ಅಲೆಯನ್ನು ನಿಭಾಯಿಸಲು ಸರ್ಕಾರ ವಿಫಲವಾಗಿದ್ದು, ಇದರಿಂದ ಸರ್ಕಾರದ ವಿರುದ್ಧ ಜನಾಕ್ರೋಶ ಭುಗಿಲೆದ್ದಿದೆ. ಬಿಜೆಪಿಯ ಮತದಾರರು ಕೂಡ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಇದರಿಂದ ಆತಂಕಗೊಂಡಿರುವ ಕೇಂದ್ರ ಸರ್ಕಾರ, ಜನರ ಮನಸ್ಸನ್ನು ಬೇರೆಡೆ ತಿರುಗಿಸಲು ಧರ್ಮದ ಹೆಸರಿನಲ್ಲಿ ಗಿಮಿಕ್ ಮಾಡಲು ಮುಂದಾಗಿದೆ. ಉತ್ತರ ಪ್ರದೇಶ ಸೇರಿದಂತೆ ಇತರ ಕೆಲವು ರಾಜ್ಯಗಳಲ್ಲಿ ಶೀಘ್ರವೇ ವಿಧಾನಸಭಾ ಚುನಾವಣೆ ನಡೆಯಲಿದೆ. ಆದ್ದರಿಂದ ವೈಫಲ್ಯವನ್ನು ಮರೆಮಾಚಲು ಕೋಮು ರಾಜಕೀಯದ ಮೂಲಕ ಕೋಮು ಧ್ರುವೀಕರಣಕ್ಕೆ ಬಿಜೆಪಿ ಮುಂದಾಗಿದೆ. ನಾಗರಿಕ ಸಮಾಜ ಬಿಜೆಪಿ ಈ ನಡೆಯ ವಿರುದ್ಧ ಧ್ವನಿ ಎತ್ತಬೇಕು ಎಂದು ಅನೀಸ್ ಅಹ್ಮದ್ ಮನವಿ ಮಾಡಿದ್ದಾರೆ.

Join Whatsapp