ಅಂಜಲಿ ಹತ್ಯೆ ಪ್ರಕರಣ: ಸಿಐಡಿ ಅಧಿಕಾರಿಗಳಿಂದ ಸ್ಥಳ ಮಹಜರು

Prasthutha|

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು, ಆರೋಪಿ ಗಿರೀಶ ಸಾವಂತನನ್ನು ಕರೆತಂದು ಶುಕ್ರವಾರ ಸ್ಥಳ ಮಹಜರು ನಡೆಸಿದರು.

- Advertisement -

ನಗರದ ವೀರಾಪೂರ ಓಣಿಯಲ್ಲಿರುವ ಮನೆಯಲ್ಲಿ ಅಂಜಲಿ ಹತ್ಯೆ ನಡೆದಿತ್ತು. ಆರೋಪಿಯನ್ನು ಸ್ಥಳಕ್ಕೆ ಕರೆತಂದ ಸಿಐಡಿ ಅಧಿಕಾರಿಗಳು ಘಟನಾ ಸ್ಥಳ ಹಾಗೂ ಸುತ್ತಲಿನ ಪ್ರದೇಶ ಪರಿಶೀಲಿಸಿದರು. ಆರೋಪಿಯಿಂದ ಅಗತ್ಯ ಮಾಹಿತಿ ಪಡೆದರು. ಈ ವೇಳೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

Join Whatsapp