ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಅಂಕಿತಾಗೆ 5 ಲಕ್ಷ ರೂ. ಮತ್ತು ಮೂರನೇ ಸ್ಥಾನ ಗಳಿಸಿರುವ ಮಂಡ್ಯದ ನವನೀತ್ ಗೆ 2 ಲಕ್ಷ ರೂ. ಪ್ರೋತ್ಸಾಹಧನ ನೀಡಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೌರವಿಸಿದರು.
ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಪೋಷಕರೊಂದಿಗೆ ಬೆಂಗಳೂರಿಗೆ ಬಂದಿದ್ದ ಅಂಕಿತಾ, ಉಪ ಮುಖ್ಯಮಂತ್ರಿಯವರನ್ನು ಮಂಗಳವಾರ ಭೇಟಿಮಾಡಿದರು. ಆಗ, ವಿದ್ಯಾರ್ಥಿನಿಗೆ 5 ಲಕ್ಷ ರೂ. ಮೊತ್ತದ ಚೆಕ್ ನೀಡಿ ಗೌರವಿಸಿದರು.