Home ರಾಷ್ಟ್ರೀಯ ಅಂಕೋಲಾ ದುರಂತ: ಈವರೆಗೆ 6 ಮಂದಿಯ ಮೃತದೇಹ ಪತ್ತೆ, 10 ಮಂದಿ ಕಣ್ಮರೆ

ಅಂಕೋಲಾ ದುರಂತ: ಈವರೆಗೆ 6 ಮಂದಿಯ ಮೃತದೇಹ ಪತ್ತೆ, 10 ಮಂದಿ ಕಣ್ಮರೆ

ಕಾರವಾರ: ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದ ಅವಘಡದಲ್ಲಿ ಈವರೆಗೆ ಹತ್ತು ಮಂದಿ ಕಣ್ಮರೆಯಾಗಿದ್ದ ಮಾಹಿತಿ ಇದ್ದು, ಈ ಪೈಕಿ ಆರು ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು.


‘ಶಿರೂರಿನ ಒಂದೇ ಕುಟುಂಬದ ನಾಲ್ಕು ಮತ್ತು ಅದೇ ಕುಟುಂಬದ ಸಂಬಂಧಿ ಜಗನ್ನಾಥ, ಉಳುವರೆ ಗ್ರಾಮದ ಸಣ್ಣಿ ಗೌಡ, ಮೂರು ಟ್ಯಾಂಕರ್ ಹಾಗೂ ಒಂದು ಲಾರಿಯ ಚಾಲಕ ಕಣ್ಮರೆಯಾಗಿರುವುದಾಗಿ ಅವರ ಕುಟುಂಬಗಳು ಮಾಹಿತಿ ನೀಡಿವೆ. ಈ ಪೈಕಿ ಶಿರೂರಿನ ನಾಲ್ವರು, ತಮಿಳುನಾಡಿನ ನಾಮಕ್ಕಲ್’ನ ಚಿಣ್ಣನನ್ ಎಂಬ ಟ್ಯಾಂಕರ್ ಚಾಲಕನ ಮೃತದೇಹ ಪತ್ತೆಯಾಗಿದೆ. ಇನ್ನೊಂದು ಮೃತದೇಹದ ಗುರುತು ಪತ್ತೆ ಕಾರ್ಯ ನಡೆದಿದೆ ಎಂದು ಹೇಳಿದ್ದಾರೆ.

Join Whatsapp
Exit mobile version