ವೈನ್ ನೀತಿ ವಿರುದ್ಧ ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ ಅಣ್ಣಾ ಹಜಾರೆ

Prasthutha|

ಮುಂಬೈ: ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಶಾಪ್‌ ಗಳಲ್ಲಿ  ವೈನ್ ಮಾರಾಟಕ್ಕೆ ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ  ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಜ್ಞಾಪನಾ ಪತ್ರ ಬರೆದಿದ್ದಾರೆ.

- Advertisement -

 ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈನ್ ನೀತಿಯನ್ನು ವಿರೋಧಿಸಿ ಫೆಬ್ರವರಿ 3 ರಂದು ಸಿಎಂಗೆ  ಈ ಮೊದಲು ಪತ್ರ ಕಳುಹಿಸಿದ್ದೆ ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬರದ ಕಾರಣ ನಾನು ಜ್ಞಾಪನಾ ಪತ್ರವನ್ನು ಕಳುಹಿಸುತ್ತಿದ್ದೇನೆ. ರಾಜ್ಯ ಸರ್ಕಾರ ಇತ್ತೀಚೆಗೆ ಸೂಪರ್ ಮಾರ್ಕೆಟ್ ಮತ್ತು ದಿನಸಿ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಲು ನಿರ್ಧರಿಸಿದೆ. ಈ ನಿರ್ಧಾರವು ರಾಜ್ಯದ ದುರದೃಷ್ಟಕರ ಮತ್ತು ಮುಂದಿನ ಪೀಳಿಗೆಗೆ ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ.



Join Whatsapp