ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಅಣ್ಣಾಮಲೈ ಆಗ್ರಹ

Prasthutha|

ಚೆನ್ನೈ: ತಮಿಳುನಾಡು ಸೇರಿ ದೇಶದ 21 ರಾಜ್ಯಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ (ಎಪ್ರಿಲ್ 19) ನಡೆದಿದೆ. ಆದರೆ ಇದೀಗ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಮರು ಮತದಾನಕ್ಕೆ ಆಗ್ರಹಿಸಿದ್ದಾರೆ.

- Advertisement -


ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾಗಿದೆ ಎಂದು ಹೆಚ್ಚಿನ ಸಂಖ್ಯೆಯ ಮತದಾರರಿಂದ ದೂರು ಕೇಳಿ ಬಂದಿದೆ ಎಂದು ಅಣ್ಣಾಮಲೈ ಹೇಳಿದ್ದಾರೆ. ಹೀಗಾಗಿ ಮರು ಮತದಾನ ನಡೆಯಬೇಕು ಎಂದು ಬಿಜೆಪಿ ಅಧ್ಯಕ್ಷ ಆಗ್ರಹಿಸಿದ್ದಾರೆ. ಕೊಯಮತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಅಣ್ಣಾಮಲೈ, ಮತದಾರರ ಪಟ್ಟಿಯಿಂದ ಹಲವಾರು ಬಿಜೆಪಿ ಕಾರ್ಯಕರ್ತರ ಹೆಸರು ನಾಪತ್ತೆಯಾಗಿರುವುದರಿಂದ ರಾಜಕೀಯ ಹಸ್ತಕ್ಷೇಪ ನಡೆದಿರುವ ಶಂಕೆ ವ್ಯಕ್ತವಾಗಿದೆ ಎಂದಿದ್ದಾರೆ.

Join Whatsapp