IPLನಲ್ಲಿ ಚೆನ್ನೈ ತಂಡಕ್ಕೆ ಗೆಲುವು ತಂದುಕೊಟ್ಟದ್ದು ಬಿಜೆಪಿ ಕಾರ್ಯಕರ್ತ ಎಂದ ಅಣ್ಣಾಮಲೈ: ವ್ಯಾಪಕ ಆಕ್ರೋಶ

Prasthutha|

ಚೆನ್ನೈ: ಗುಜರಾತ್ ಟೈಟಾನ್ಸ್  ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್  ಗೆದ್ದು ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾ ಮಲೈ ಹೇಳಿದ ಮಾತು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಸಿಎಸ್‌’ಕೆ ಜಯಗಳಿಸಿದ ಬೆನ್ನಲ್ಲೇ  “ಗುಜರಾತ್ ಮಾದರಿಯ ಮೇಲೆ ದ್ರಾವಿಡ ಮಾದರಿಯ ವಿಜಯ” ಎಂದು ಡಿಎಂಕೆ (DMK) ಹೇಳಿತ್ತು.

ಈ ಸಂದೇಶಕ್ಕೆ ಪ್ರತಿಕ್ರಿಯಿಸಿದ ಅಣ್ಣಾಮಲೈ, ಜಡೇಜಾ ಬಿಜೆಪಿ ಕಾರ್ಯಕರ್ತ ಮತ್ತು ಅವರು ಗುಜರಾತ್ ಮೂಲದವರು. ಅವರ ಪತ್ನಿ ಬಿಜೆಪಿ ಶಾಸಕಿ. ತಮಿಳಿಗನಾಗಿ ನನಗೂ ಹೆಮ್ಮೆ ಇದೆ. ಸಿಎಸ್‌ ಕೆಗಿಂತ ಜಿಟಿಯಲ್ಲಿ ಹೆಚ್ಚು ತಮಿಳು ಆಟಗಾರರಿದ್ದರು ಎಂದು ಹೇಳಿದ್ದಾರೆ.

- Advertisement -

ರವೀಂದ್ರ ಜಡೇಜಾ  ಎಲ್ಲಿಯೂ ಬಿಜೆಪಿಗೆ ಬಹಿರಂಗವಾಗಿಯೇ ಬೆಂಬಲ ಸೂಚಿಸಿಲ್ಲ. ಆದರೆ ಅವರ ಪತ್ನಿ 2019ರಲ್ಲಿ ಬಿಜೆಪಿ ಸೇರ್ಪಡೆಯಾಗಿ 2022ರ ಚುನಾವಣೆಯಲ್ಲಿ ಜಾಮ್‌ ನಗರ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು.

ಅಣ್ಣಾಮಲೈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

Join Whatsapp