ವಿವಿಧ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ

Prasthutha|

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2023ನೇ ಜನವರಿ ತಿಂಗಳಿಂದ 2023ರ ಏಪ್ರಿಲ್ ತಿಂಗಳವರೆಗೆ ಅವಧಿ ಮುಕ್ತಾಯವಾಗಲಿರುವ ದೇವನಹಳ್ಳಿ ತಾಲ್ಲೂಕಿನ ಹಾರೋಹಳ್ಳಿ ಮತ್ತು ಕೋರಮಂಗಲ ಗ್ರಾಮ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ 15-ತಿಪ್ಪೂರು ಗ್ರಾಮ ಪಂಚಾಯತಿಯ 3-ವಾಣಿಗರಹಳ್ಳಿ ಕ್ಷೇತ್ರದಲ್ಲಿ ಮರಣದಿಂದ ತೆರವಾಗಿರುವ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯನ್ನು ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

- Advertisement -


ಚುನಾವಣಾ ವೇಳಾಪಟ್ಟಿಯಂತೆ 2023ರ ಫೆಬ್ರವರಿ 08 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು, 2023ರ ಫೆಬ್ರವರಿ 14 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದ್ದು, ಫೆಬ್ರವರಿ 15 ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಫೆಬ್ರವರಿ 17 ರಂದು ಉಮೇದುವಾರಿಕೆಗಳನ್ನು ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಫೆಬ್ರವರಿ 25 ರಂದು ಮತದಾನ ಅವಶ್ಯವಿದ್ದರೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.


ಫೆಬ್ರವರಿ 27 ರಂದು ಮರು ಮತದಾನ ಅವಶ್ಯವಿದ್ದರೆ, ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮರುಮತದಾನ ನಡೆಯಲಿದೆ. ಫೆಬ್ರವರಿ 28ರ ಮಂಗಳವಾರದಂದು ತಾಲ್ಲೂಕು ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತಗಳ ಏಣಿಕೆ ಕಾರ್ಯ ನಡೆಯಲಿದ್ದು, ಫೆಬ್ರವರಿ 28 ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ. ಚುನಾವಣಾ ನೀತಿ ಸಂಹಿತೆಯು 2023ರ ಫೆಬ್ರವರಿ 08 ರಿಂದ ಫೆಬ್ರವರಿ 28 ರವರೆಗೆ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯಿತಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅರ್.ಲತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Join Whatsapp