ಇನ್ನು ಮುಂದೆ 5 ಮತ್ತು 8ನೇ ತರಗತಿಗಳಿಗೂ ವಿಶೇಷ ವಾರ್ಷಿಕ ಪರೀಕ್ಷೆ : ಶಿಕ್ಷಣ ಇಲಾಖೆ ಆದೇಶ

Prasthutha|

ಬೆಂಗಳೂರು: 2022-23 ನೇ ಸಾಲಿನಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಗಳಿಗೂ ವಿಶೇಷ ವಾರ್ಷಿಕ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

- Advertisement -

ಮಕ್ಕಳ ಕಲಿಕಾ ಕೊರತೆಯನ್ನು ನೀಗಿಸಿ ಕಲಿಕೆಯಲ್ಲಿ ಚೇತರಿಸಿಕೊಳ್ಳವ ಸಲುವಾಗಿ ಶಿಕ್ಷಣ ಇಲಾಖೆ ಈ ತಯಾರಿ ನಡೆಸಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇವರ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆ ರೂಪಿಸಿ ಪರೀಕ್ಷೆ ನಡೆಸಿ ಮೌಲ್ಯಮಾಪನ ಮಾಡಬೇಕು. ಫಲಿತಾಂಶವನ್ನು ಶಾಲಾವಾರು, ಕ್ಲಸ್ಟರ್ ವಾರು, ತಾಲೂಕುವಾರು ವಿಶ್ಲೇಷಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ

ಪ್ರಸ್ತುತ 1ನೇ ತರಗತಿಯಿಂದ 9ನೇ ತರಗತಿವರೆಗೆ ಶಾಲಾ ಹಂತದಲ್ಲಿ ಸಿಸಿಇ ಮೌಲ್ಯಾಂಕನ ವಿಶ್ಲೇಷಣೆ ಮಾಡುತ್ತಿರುವುದರಿಂದ ಹಾಗೂ ವಾರ್ಷಿಕ ಪರೀಕ್ಷೆಗಳನ್ನು ನಿರ್ವಹಿಸುತ್ತಿಲ್ಲವಾದ್ದರಿಂದ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳ ಒಟ್ಟಾರೆ ಸಾಧನೆ ಯಾವ ರೀತಿ ಇದೆ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಒಟ್ಟಾರೆಯಾಗಿ ಮಕ್ಕಳ ಕಲಿಕೆಯ ಮಟ್ಟವೇನು? ಕೊರತೆಗಳೇನು? ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ? ಇವುಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲಾ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಹಾಗೂ ಸಾಮರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡುವುದು ಅವಶ್ಯವಿದೆ. ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ಆದೇಶ ಮಾಡಿದೆ ಎಂದು ತಿಳಿದು ಬಂದಿದೆ.

- Advertisement -

ಪ್ರಸ್ತುತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEEB) ಇವರ ಹಂತದಲ್ಲಿ ಪ್ರಶ್ನೆ ಪತ್ರಿಕೆ ರೂಪಿಸಿ, ಸರಬರಾಜು ಮಾಡಿ ಶಾಲಾ ಹಂತದಲ್ಲಿ ಪರೀಕ್ಷೆ ನಿರ್ವಹಿಸಿ ಮೌಲ್ಯಂಕನ ವಿಶ್ಲೇಷಣೆ ಮಾಡಿ ಪ್ರಗತಿ ಕುಂಠಿತವಾಗಿರುವ ವಿಷಯವಾರು, ಶಾಲಾವಾರು, ಕ್ಲಸ್ಟರ್/ತಾಲ್ಲೂಕುವಾರು ವಿಶ್ಲೇಷಿಸಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅಗತ್ಯ ಕ್ರಿಯಾ ಯೋಜನೆಯನ್ನು ರಚಿಸಿ ಭೋಧನಾ-ಕಲಿಕಾ ಪ್ರಕ್ರಿಯೆಯನ್ನು ಬಲವರ್ಧನೆಗೊಳಸುವ ಉದ್ದೇಶ ಹೊಂದಿದೆ. ಆದ್ದರಿಂದ ಸದರಿ ಪರೀಕ್ಷೆ ನಿರ್ವಹಣೆ ಕುರಿತು ಸಂಬಂಧಿಸಿದ ಅನುಷ್ಠಾನಾಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಿ, ಚರ್ಚಿಸಿ ನಿರ್ಣಯಿಸಿದಂತೆ ಪರೀಕ್ಷಾ ನಿರ್ವಹಣೆಗೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲು ಮಾರ್ಗಸೂಚಿ ಸಿದ್ಧಪಡಿಸಿ ಅನುಬಂದಿಸಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Join Whatsapp