ಗಾಝಾ: ಗಾಝಾದ ಅತಿದೊಡ್ಡ ಆಸ್ಪತ್ರೆಯಲ್ಲಿ ಆಮ್ಲಜನಕ, ಇಂಧನ ಮತ್ತು ಇತರ ಮೂಲಭೂತ ಸರಬರಾಜು ಖಾಲಿಯಾದ ಪರಿಣಾಮ ಮೂರು ನವಜಾತ ಶಿಶುಗಳು ಮತ್ತು 24 ಇತರ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ತೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 48 ಗಂಟೆಗಳಲ್ಲಿ ವಿವಿಧ ವಿಭಾಗಗಳಲ್ಲಿ 24 ರೋಗಿಗಳು ಸಾವನ್ನಪ್ಪಿದ್ದಾರೆ. ವಿದ್ಯುತ್ ಕಡಿತದಿಂದಾಗಿ ಪ್ರಮುಖ ವೈದ್ಯಕೀಯ ಉಪಕರಣಗಳು ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿವೆ ಎಂದು ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕುದ್ರಾ ಹೇಳಿದ್ದಾರೆ.
ಆಸ್ಪತ್ರೆಯನ್ನು ಸ್ಥಳಾಂತರಿಸುವಂತೆ ಇಸ್ರೇಲ್ ಹಲವಾರು ಕರೆಗಳನ್ನು ಮಾಡಿದ್ದರೂ, ರೋಗಿಗಳನ್ನು ಸ್ಥಳಾಂತರಿಸಲು ಸಾಧ್ಯವಿಲ್ಲ ಎಂದು ವೈದ್ಯಕೀಯ ವೃತ್ತಿಪರರು ಹೇಳಿದ್ದಾರೆ.