Home ಟಾಪ್ ಸುದ್ದಿಗಳು ಮತದಾರರ ಪಟ್ಟಿ ಅಕ್ರಮ| ಮತ್ತೊಬ್ಬ ಆರೋಪಿ ಬಂಧನ

ಮತದಾರರ ಪಟ್ಟಿ ಅಕ್ರಮ| ಮತ್ತೊಬ್ಬ ಆರೋಪಿ ಬಂಧನ

ಬೆಂಗಳೂರು: ಮತದಾರರ ವೈಯಕ್ತಿಕ ಮಾಹಿತಿ ಕಳವು ಹಾಗೂ ದುರ್ಬಳಕೆ ಆರೋಪದಡಿ ಚಿಲುಮೆ ಸಂಸ್ಥೆ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

 ಮತದಾರರ ಮಾಹಿತಿ ಸಂಗ್ರಹಿಸುವ ಕೆಲಸಕ್ಕೆ ಸಹಾಯ ಮಾಡಿದ್ದ ಅನಿಲ್‌ ಎಂಬುವವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 12ಕ್ಕೆ ಏರಿದೆ.

‘ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ಜೊತೆಗೆ ಒಡನಾಟ ಹೊಂದಿದ್ದ ಅನಿಲ್, ಮತದಾರರ ಮಾಹಿತಿ ಸಂಗ್ರಹಿಸುವ ಕೆಲಸಕ್ಕೆ ಸಹಾಯ ಮಾಡಿದ್ದ. ರವಿಕುಮಾರ್‌ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಅನಿಲ್ ಹೆಸರು ಬಾಯ್ಬಿಟ್ಟಿದ್ದ. ಈ ಮಾಹಿತಿ  ಆಧರಿಸಿ ಅನಿಲ್‌ನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version