Home ಟಾಪ್ ಸುದ್ದಿಗಳು ಅರಣಾಚಲ ಪ್ರದೇಶದಲ್ಲಿ ಮತ್ತೊಂದು ಸೇನಾ ಹೆಲಿಕಾಪ್ಟರ್ ಪತನ

ಅರಣಾಚಲ ಪ್ರದೇಶದಲ್ಲಿ ಮತ್ತೊಂದು ಸೇನಾ ಹೆಲಿಕಾಪ್ಟರ್ ಪತನ

ಗುವಾಹಟಿ: ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಸೇನಾ ಹೆಲಿಕಾಪ್ಟರ್’ವೊಂದು ಶುಕ್ರವಾರ ಬೆಳಗ್ಗೆ ಪತನಗೊಂಡಿದೆ.

ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ALH) ಮಿಗ್ಗಿಂಗ್ ಗ್ರಾಮದ ಬಳಿ ಪತನಗೊಂಡಿದ್ದು, ಅಪಘಾತದ ಸ್ಥಳವು ಯಾವುದೇ ರಸ್ತೆ ಸಂಪರ್ಕ ಹೊಂದಿಲ್ಲ ಮತ್ತು ಘಟನಾ ಸ್ಥಳದಲ್ಲಿ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ ಎಂದು ಅಪ್ಪರ್ ಸಿಯಾಂಗ್ ಹಿರಿಯ ಪೊಲೀಸ್ ಅಧಿಕಾರಿ ಜುಮ್ಮರ್ ಬಸಾರ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಅಕ್ಟೋಬರ್ ತಿಂಗಳಲ್ಲಿ ಅರುಣಾಚಲ ಪ್ರದೇಶದಲ್ಲಿ ಇದು ಎರಡನೇ ಹೆಲಿಕಾಪ್ಟರ್ ಪತನವಾಗಿದ್ದು, ತಿಂಗಳ ಆರಂಭದಲ್ಲಿ ತವಾಂಗ್ ಬಳಿಕ್ ಚೀತಾ ಹೆಲಿಕಾಪ್ಟರ್ ಪತನಗೊಂಡು ಪೈಲಟ್ ತನ್ನ ಪ್ರಾಣವನ್ನು ಕಳೆದುಕೊಂಡಿದ್ದರು ಮತ್ತು ಹಲವರು ಗಾಯಗೊಂಡಿದ್ದರು.

Join Whatsapp
Exit mobile version