ನಟ ದರ್ಶನ್ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

Prasthutha|

ಬೆಂಗಳೂರು: ಕೊಲೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ನಾಲ್ಕು ಬಾರ್ ಹೆಡೆಡ್ ಗೂಸ್ (ವಿಶಿಷ್ಟ ಪ್ರಭೇದದ ಬಾತುಕೋಳಿ)ಗಳನ್ನು ಸಾಕಿದ್ದ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದರ್ಶನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

- Advertisement -


ದರ್ಶನ್, ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ.


ಅರಣ್ಯ ಇಲಾಖೆಯ ವಿಚಕ್ಷಣಾ ವಿಭಾಗದಿಂದ ಎಫ್ಐಆರ್ ದಾಖಲಿಸಲಾಗಿದೆ. ಅಗತ್ಯವಿರುವ ಸೆಕ್ಷನ್ ಗಳ ಅಡಿಯಲ್ಲಿ ಐದು ನೋಟಿಸ್ಗಳನ್ನು ಜಾರಿ ಮಾಡಲಾಗಿದೆ, ಆದರೆ ಇದೂವರೆಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿಲ್ಲ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

Join Whatsapp