ಹೈದ್ರಾಬಾದ್: ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಮತ್ತೆ ಮತ್ತೆ ಸಂಕಷ್ಟ ಎದುರಾಗುತ್ತಿದ್ದು, ಈಗಾಗಲೇ ವಿವಿಧ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಸಿಐಡಿ ಅಧಿಕಾರಿಗಳು ಮಾಧ್ಯಮಂ ಪ್ರಕರಣದಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.
ಟಿಡಿಪಿ ಆಡಳಿತಾವಧಿಯಲ್ಲಿ ಮದ್ಯ ಕಂಪನಿಗಳಿಗೆ ಅಕ್ರಮ ಅನುಮತಿ ನೀಡಲಾಗಿದೆ ಎಂದು ಸಿಐಡಿ ಆರೋಪಿಸಿದ್ದು, ಚಂದ್ರಬಾಬು ನಾಯ್ಡು ವಿರುದ್ಧ ಪಿಸಿ (ಭ್ರಷ್ಟಾಚಾರ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಎ-3 ಎಂದು ಸೇರಿಸಲಾಗಿದೆ.