Home ಕರಾವಳಿ ಮಂಗಳೂರು | ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು: ಪ್ರವೇಶ ನಿರಾಕರಿಸಿದ ಮತ್ತೊಂದು ಪ್ರಕರಣ

ಮಂಗಳೂರು | ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು: ಪ್ರವೇಶ ನಿರಾಕರಿಸಿದ ಮತ್ತೊಂದು ಪ್ರಕರಣ

ಮಂಗಳೂರು: ಮಂಗಳೂರಿನ ವಿವಿ ಘಟಕ ಕಾಲೇಜಿಗೆ ಶನಿವಾರ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದು, ಈ ವೇಳೆ ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಬಾರದಂತೆ ಪ್ರವೇಶ ನಿರಾಕರಿಸಿದ್ದಾರೆ.

ಇಂದು ಕೂಡ ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಾಬ್ ಧರಸಿ ಬಂದಿದ್ದಾರೆ. ಆದರೆ ಪ್ರಾಂಶುಪಾಲರು ತರಗತಿಗೆ ಬಾರದಂತೆ ಪ್ರವೇಶ ನಿರಾಕರಿಸಿದ್ದು, ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯದತ್ತ ತೆರಳಿದರು. ಅಲ್ಲೂ ವಿದ್ಯಾರ್ಥಿನಿಯರನ್ನು ತಡೆಯಲಾಯಿತು.
ಶುಕ್ರವಾರ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಯಾವುದೇ ಕಾರಣಕ್ಕೂ ಕಾಲೇಜಿಗೆ ಹಿಜಾಬ್ ಧರಿಸಿ ಪ್ರವೇಶ ಇಲ್ಲ. ಕಾಲೇಜು ಕ್ಯಾಂಪಸ್ ಗೆ ಹಿಜಾಬ್ ಹಾಕಿಕೊಂಡು ಬರಬಹುದು. ತರಗತಿ, ಲೈಬ್ರೆರಿ ಸೇರಿ ಯಾವುದೇ ತರಗತಿಗೆ ಹಾಕಲು ಅವಕಾಶ ಇಲ್ಲ ಎಂದು ಮಂಗಳೂರು ವಿವಿ ಉಪಕುಲಪತಿ ಡಾ.ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದ್ದರು.

Join Whatsapp
Exit mobile version