ಮತ್ತೊಂದು ಚೀತಾ ಸಾವು: 8ಕ್ಕೆ ಏರಿದ ಸಾವಿನ ಸಂಖ್ಯೆ

Prasthutha|

ಭೋಪಾಲ್: ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನದಲ್ಲಿ ಶುಕ್ರವಾರ ಗಂಡು ಚೀತಾ ಸೂರಜ್ ಸಾವನ್ನಪ್ಪಿದೆ. ಈ ಉದ್ಯಾನದಲ್ಲಿ ಸುಮಾರು 4 ತಿಂಗಳುಗಳಲ್ಲಿ ಸಾವನ್ನಪ್ಪಿರುವ 8ನೇ ಚೀತಾ ಇದಾಗಿದೆ.

- Advertisement -


ಇಂದು ಮುಂಜಾನೆ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಆಫ್ರಿಕಾದಿಂದ ತರಲಾಗಿದ್ದ ಚೀತಾ ಸೂರಜ್ ಶವವಾಗಿ ಪತ್ತೆಯಾಗಿದೆ.


ಸೂರಜ್ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರವಷ್ಟೇ ಮತ್ತೊಂದು ಗಂಡು ಚೀತಾ ತೇಜಸ್ ಶವವಾಗಿ ಪತ್ತೆಯಾಗಿತ್ತು. ಕೆಲ ದಿನಗಳ ಹಿಂದೆ ಹೆಣ್ಣು ಚೀತಾದೊಂದಿಗೆ ಕಾದಾಟ ನಡೆಸಿದ್ದು, ಬಳಿಕ ಅದು ಚೇತರಿಸಿಕೊಳ್ಳಲು ಸಾಧ್ಯವಾಗದೇ ಸಾವನ್ನಪ್ಪಿದೆ ಎಂಬುದು ಶವಪರೀಕ್ಷೆಯಲ್ಲಿ ಬಹಿರಂಗವಾಗಿದೆ.