ಬೆಂಗಳೂರು: ದೈವಾರಾಧನೆ ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದು ಹೇಳಿಕೆ ನೀಡಿದ್ದ ನಟ ಚೇತನ್ ಮೇಲೆ ಮತ್ತೊಂದು ದೂರು ದಾಖಲಾಗಿದೆ.
ಚೇತನ್ ವಿರುದ್ಧ ಬಜರಂಗದ ದಳದ ಕಾರ್ಯಕರ್ತ ಮಂಜುನಾಥ್ ಎಂಬವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಟ ಚೇತನ್ ಹಿಂದೂ ದೇವರ ಹಾಗೂ ಸಂಸ್ಕೃತಿಯ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.