Home ಟಾಪ್ ಸುದ್ದಿಗಳು ಗುಂಡಿಕ್ಕಿ ಕೊಲ್ಲುವ ಹೇಳಿಕೆ: ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲು

ಗುಂಡಿಕ್ಕಿ ಕೊಲ್ಲುವ ಹೇಳಿಕೆ: ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು: ಸಂಸದ ಡಿ.ಕೆ.ಸುರೇಶ್ ಮತ್ತು ವಿನಯ್ ಕುಲಕರ್ಣಿ ಅವರಿಗೆ ಗುಂಡಿಕ್ಕಿ ಕೊಲ್ಲಬೇಕೆಂದು ಹೇಳಿಕೆ ನೀಡಿದ್ದ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಆರ್ ಆರ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿದರು. ಕೆಎಸ್ ಈಶ್ವರಪ್ಪ ಅವರ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ (ಫೆ.09) ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.

Join Whatsapp
Exit mobile version