ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು

Prasthutha|

ಬೆಂಗಳೂರು: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

- Advertisement -

ಪ್ರಜ್ವಲ್ ವಿರುದ್ಧ ಮತ್ತೊಬ್ಬ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ತನಿಖೆಯನ್ನೂ ಎಸ್ ಐಟಿ ಕೈಗೆತ್ತಿಕೊಂಡಿದೆ. ದೂರಿನ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ‘ಮತ್ತೊಬ್ಬ ಮಹಿಳೆ ದೂರು ನೀಡಿದ್ದಾರೆ. ಇದು ಎರಡನೇ ದೂರು. ಮಹಿಳೆಯರು ಧೈರ್ಯವಾಗಿ ಬಂದು ದೂರು ನೀಡಬಹುದು. ತಮಗೆ ಸರ್ಕಾರ ಎಲ್ಲ ರೀತಿಯ ಭದ್ರತೆ ನೀಡಲಿದೆ’ ಎಂದು ತಿಳಿಸಿದರು.

Join Whatsapp