ಚೆನ್ನೈನಲ್ಲಿ ಮತ್ತೋರ್ವ ವೈದ್ಯನ ಮೇಲೆ ಆಸ್ಪತ್ರೆಯಲ್ಲಿ ಹಲ್ಲೆ: ಪ್ರತಿಭಟನೆ

Prasthutha|

ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತನ್ನ ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎನ್ನುವ ಕಾರಣ ಕೊಟ್ಟು ವೈದ್ಯರೊಬ್ಬರಿಗೆ ಚಾಕುವಿನಿಂದ ಇರಿದಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -


ಚೆನ್ನೈನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ವೈದ್ಯರೊಬ್ಬರ ಮೇಲೆ ರೋಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲ್ಲೆಗೊಳಗಾದವರನ್ನು ಡಾ ಹರಿಹರನ್ ಎಂದು ಗುರುತಿಸಲಾಗಿದ್ದು, ಇವರು ಸರ್ಕಾರಿ ಸ್ವಾಮ್ಯದ ಸ್ಟಾನ್ಲಿ ಮೆಡಿಕಲ್ ಕಾಲೇಜಿನ ಸೈಕಾಲಜಿ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಆರೋಪಿಯನ್ನು ನೀಲಂಕರೈ ಮೂಲದ ಭರತ್ ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆಸ್ಪತ್ರೆಯ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ. ವೈದ್ಯರು ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆದಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.



Join Whatsapp