ಹಾಸನ: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿರುವ ದುರ್ಘಟನೆ ಸಕಲೇಶಪುರ ತಾಲೂಕಿನ ಸುಳ್ಳಕ್ಕಿ ಮೇಲಕೆರೆ ಗ್ರಾಮದಲ್ಲಿ ನಡೆದಿದೆ.
ಸುಳ್ಳಕ್ಕಿ ಮೇಲಕೆರೆಯ ಕೆಂಪಣ್ಣ (50) ಕಾಡಾನೆ ದಾಳಿಗೆ ಬಲಿಯಾದ ರೈತರಾಗಿದ್ದಾರೆ.
ರೈತ ಕೆಂಪಣ್ಣ ಇಂದು ಮುಂಜಾನೆ ಜಮೀನಿಗೆ ತೆರಳಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸಕಲೇಶಪುರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಳ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳಿಯರ ಹಾಗೂ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.