ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್’ಐಆರ್

Prasthutha|

ಬೆಂಗಳೂರು: ಮತದಾರರಿಗೆ ಬೆಂಬಲಿಗರು ಸೀರೆ ಹಂಚುತ್ತಿದ್ದ ಹಿನ್ನೆಲೆಯಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್’ಐಆರ್ ದಾಖಲಾಗಿದೆ. ಚುನಾವಣಾ ಆಯೋಗದ ಅಧಿಕಾರಿ ಮನೋಜ್ ಕುಮಾರ್ ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -


ಇತ್ತೀಚೆಗೆ ಆರ್.ಆರ್. ನಗರದ ಬಂಗಾರಪ್ಪ ನಗರದಲ್ಲಿ ಮತದಾರರಿಗೆ ಮುನಿರತ್ನ ಬೆಂಬಲಿಗರು ಸೀರೆ ಹಂಚುವಾಗ ಸಿಕ್ಕಿಬಿದ್ದಿದ್ದರು.


ಕೋಮುದ್ವೇಷ ಭಾಷಣ ಹಿನ್ನೆಲೆಯಲ್ಲಿ ಸಚಿವ ಮುನಿರತ್ನ ವಿರುದ್ಧ ಆರ್.ಆರ್. ನಗರ ಪೊಲೀಸರು ಎಫ್’ಐಆರ್ ದಾಖಲಿಸಿಕೊಂಡಿದ್ದರು.

- Advertisement -


ಕಳೆದ ಮಾರ್ಚ್ 31ರಂದು ಖಾಸಗಿ ಸುದ್ದಿವಾಹಿನಿಯಲ್ಲಿ ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯವನ್ನು ಹೊಡೆದು ಓಡಿಸಿ ಎಂದು ಶಾಸಕ ಮುನಿರತ್ನ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕೋಮುದ್ವೇಷ ಪ್ರಚೋದಿತ ಭಾಷಣದ ಬಗ್ಗೆ ಚುನಾವಣಾಧಿಕಾರಿ ಮನೋಜ್ ಕುಮಾರ್ ದೂರು ನೀಡಿದ್ದರು. ಅಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.



Join Whatsapp