ಮತ್ತೊಂದು ಹಿಂದೂ ಸ್ವಾಮೀಜಿ ವಿರುದ್ಧ ಹರಿಹಾಯ್ದ ‘ಹಿಂದೂ ಹುಲಿ’ ಯತ್ನಾಳ್

Prasthutha|

ದಾವಣಗೆರೆ: ಕಳ್ಳ ಸ್ವಾಮಿ ಮಾತು ಕೇಳಬೇಡಿ, ಎಸಿ ರೂಂ ಸ್ವಾಮೀಜಿ ನಮಗೆ ಬೇಕಾಗಿಲ್ಲ ಎಂದು ಹೇಳುವ ಮೂಲಕ ಹರಿಹರ ವಚನಾನಂದ ಸ್ವಾಮೀಜಿ ವಿರುದ್ಧ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಕಿಡಿ ಕಾರಿದ್ದಾರೆ.

- Advertisement -

ದಾವಣಗೆರೆಯಲ್ಲಿ ನಡೆದ ಪಂಚಮಸಾಲಿ ಸಮಾಜದ ಸಭೆಯಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ , ನಿನ್ನ ಬಾಯಿ ಸರಿ ಇದ್ದರೆ ನೀನೆ ಮುಖ್ಯಮಂತ್ರಿ ಆಗ್ತಿದ್ದೆ ಎಂದು ಸಂಸದ ಜಿಎಂ ಸಿದ್ದೇಶ್ವರ್ ಹೇಳ್ತಾ ಇದ್ರು. ನಾನು ಆಸ್ತಿ ಮಾಡಿಲ್ಲ, ಐಟಿ, ಇಡಿ ರೇಡ್ ಮಾಡಿದರೆ ಏನೂ ಸಿಗಲ್ಲ‌. ಇಡೀ ರಾಜ್ಯದಲ್ಲಿ ಮೂರು ಕುಟುಂಬಗಳು ವೀರಶೈವ ಲಿಂಗಾಯತ ಕಪಿಮುಷ್ಠಿಯಲ್ಲಿದೆ. ಇವ್ರು ಎಲ್ಲಾದರು ಹಾಸ್ಟೇಲ್ ಕಟ್ಟಿದ್ದಾರಾ?. ಎಲ್ಲಾ ರಾಜಕೀಯ ಪಕ್ಷದವರು ಪಂಚಮಸಾಲಿ ಸಮಾಜವನ್ನ ತುಳಿದಿದ್ದಾರೆ‌ ಎಂದು ದೂರಿದ್ದಾರೆ. ಪಂಚಮಸಾಲಿ ಸಮಾಜ ಕೂಡಲ ಸಂಗಮ‌ ಶ್ರೀಗಳಿಗೆ ಋಣಿಯಾಗಿರಬೇಕು. ಬಿಜೆಪಿಗೆ ವೋಟ್ ಹಾಕಬೇಡ ಎಂದು ಇವರಿಗೆ ಯಾರ ಪರ್ಮಿಷನ್ ಕೊಟ್ಟಿದ್ದಾರೆ ಎಂದು ಸ್ವಾಮೀಜಿ‌ ವಿರುದ್ಧ ಹರಿಹಾಯ್ದಿದ್ದಾರೆ.

ಇತ್ತೀಚೆಗೆ ಶಿರಹಟ್ಟಿಯ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಯತ್ನಾಳ್ ಹರಿಹಾಯ್ದಿದ್ದರು. ಪೇಮೆಂಟ್ ಗಿರಾಕಿ ಎಂದಿದ್ದರು. ಪ್ರಹ್ಲಾದ್ ಜೋಷಿ ವಿರುದ್ಧ ಚುನಾವಣೆಗೆ ನಿಂತಿದ್ದಕ್ಕಾಗಿ ಸ್ವಾಮೀಜಿಯನ್ನು ತಚ್ಛವಾಗಿ ನಿಂದಿಸಿದ್ದರು.

Join Whatsapp