ಗ್ರಾಹಕರಿಗೆ ಮತ್ತೊಂದು ಗುದ್ದು : ಇನ್ಮುಂದೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗೆ ಕೇಂದ್ರದಿಂದ ಸಬ್ಸಿಡಿ ಸಿಗಲ್ಲ

Prasthutha|

ನವದೆಹಲಿ: ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡಲ್ಲ ಎಂದು ಅಧಿಕೃತವಾಗಿ ಘೋಷಿಸಿದೆ. ಮೇಲಿಂದ ಮೇಲೆಗೆ ಗೃಹೋಪಯೋಗಿ ವಸ್ತುಗಳಿಗೆ ಏರಿಕೆಯಾಗುತ್ತಿರುವ ಬೆಲೆಯಿಂದ ನೊಂದಿರುವ ಗ್ರಾಹಕರಿಗೆ ಇದು ಮತ್ತೇ ಗಾಯದ ಮೇಲೆ ಬರೆ ಎಳೆದಂತಾಗಿದೆ.

- Advertisement -

ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಮಾತನಾಡಿ, ಸಾಮಾನ್ಯ ಗ್ರಾಹಕರು ಮಾರ್ಕೆಟ್ ದರಕ್ಕೆ ಅಡುಗೆ ಅನಿಲವನ್ನು ಖರೀದಿ ಮಾಡಬೇಕಾಗುತ್ತದೆ. ಕೋವಿಡ್ ಶುರುವಾದ ದಿನದಿಂದ ಎಲ್‍ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ. ಇನ್ಮುಂದೆಯೂ ಕೂಡ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Join Whatsapp
Exit mobile version