ಉಕ್ರೇನ್ ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು

Prasthutha|

ರೆಸ್ಜೋವ್: ಉಕ್ರೇನ್‌ ರಾಜಧಾನಿ ಕೀವ್‌ ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರಿಗೆ ಗುಂಡೇಟು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೇಂದ್ರ ವಿಮಾನಯಾನ ಇಲಾಖೆ ರಾಜ್ಯ ಖಾತೆ ಸಚಿವ ಜನರಲ್‌ ವಿ.ಕೆ ಸಿಂಗ್‌ ಶುಕ್ರವಾರ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಪೋಲೆಂಡ್‌ ನ ರೆಸ್ಜೋವ್‌ನಲ್ಲಿರುವ ವಿಮಾನ ನಿಲ್ದಾಣದಲ್ಲಿ ಮಾತನಾಡಿರುವ ಅವರು, ‘ಕೀವ್‌ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬರಿಗೆ ಗುಂಡಿನೇಟು ಬಿದ್ದಿದೆ ಎಂಬ ಮಾಹಿತಿ ಸಿಕ್ಕಿದೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ‘ ಎಂದು ತಿಳಿಸಿದ್ದಾರೆ.

Join Whatsapp