ಕೇರಳದಲ್ಲಿ ಮತ್ತೊಂದು ನಿಫಾ ವೈರಸ್ ಸೋಂಕು ದೃಢ: ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ

Prasthutha|

ಕೋಯಿಕ್ಕೋಡ್: ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ಸೋಂಕಿನ ಮತ್ತೊಂದು ಪ್ರಕರಣ ದಾಖಲಾಗಿದೆ.

- Advertisement -


39 ವರ್ಷದ ವ್ಯಕ್ತಿಯೊಬ್ಬನಿಗೆ ನಿಫಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ಕೇರಳದ ಕೋಯಿಕ್ಕೋಡ್ನಲ್ಲಿ ನಿಫಾ ಸೋಂಕಿತರ ಸಂಖ್ಯೆ 6ಕ್ಕೇರಿದೆ.
ಪರೀಕ್ಷೆಗೆ ಕಳುಹಿಸಿದ್ದ ಅವರ ಮಾದರಿ ಪಾಸಿಟಿವ್ ಎಂದು ವರದಿ ಬಂದಿರುವುದಾಗಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ಕಚೇರಿ ಶುಕ್ರವಾರ ತಿಳಿಸಿದೆ.