ಮಂಗಳೂರಿನಲ್ಲಿ ಮತ್ತೊಂದು ಓಮಿಕ್ರಾನ್ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 6 ಕ್ಕೆ ಏರಿಕೆ

Prasthutha|

ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ಒಮಿಕ್ರಾನ್ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ

- Advertisement -

ಕಳೆದ 2 ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದವು. ಈ ಬೆನ್ನಲ್ಲೇ ಇದೀಗ ಮತ್ತೊಂದು ಒಮಿಕ್ರಾನ್ ಕೇಸ್​ ಪತ್ತೆಯಾಗಿದೆ.

ಎರಡು ದಿನಗಳ ಹಿಂದೆ ಮಂಗಳೂರಿನ ಕುರ್ನಾಡುವಿನ ಜೆಎನ್​ವಿ ಶಾಲೆಯಲ್ಲಿ ನಾಲ್ಕು ಮತ್ತು ಶ್ರೀನಿವಾಸ ನರ್ಸಿಂಗ್ ಕಾಲೇಜಿನಲ್ಲಿ ಒಬ್ಬರಿಗೆ ಒಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿತ್ತು. ಇಂದು ಶ್ರೀನಿವಾಸ ನರ್ಸಿಂಗ್ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿನಿಗೆ ರೂಪಾಂತರಿ ತಳಿ ಒಮಿಕ್ರಾನ್ ತಗುಲಿರುವುದು ದೃಢಪಟ್ಟಿದೆ.

- Advertisement -

ಇಂದು ಒಮಿಕ್ರಾನ್ ಸೋಂಕು ದೃಢಪಟ್ಟಿರುವ ವಿದ್ಯಾರ್ಥಿನಿ ಆರೋಗ್ಯವಾಗಿದ್ದಾಳೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ವಿದ್ಯಾರ್ಥಿನಿ ಸೇರಿದಂತೆ ಇತ್ತೀಚೆಗೆ ಒಮಿಕ್ರಾನ್ ಪತ್ತೆಯಾದ ವಿದ್ಯಾರ್ಥಿಗಳಿಗೆ ಟ್ರಾವೆಲ್ ಹಿಸ್ಟರಿ ಇಲ್ಲದೆ ಇದ್ದರೂ ವೈರಸ್ ಕಾಣಿಸಿಕೊಂಡಿರುವುದು ಅಚ್ಚರಿ ಮೂಡಿಸಿದೆ.

Join Whatsapp